ನವದೆಹಲಿ, ನ.29(DaijiworldNews/TA): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಭದ್ರಾ ಮೇಲ್ದಂಡೆ ಯೋಜನೆ ನರ್ಬಾಡ್ ಅಡಿ ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಧಾನಿಯೊಂದಿಗೆ ಮಾತುಕತೆ ಮುಗಿದ ಬಳಿಕ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಪ್ರಧಾನಿಗಳನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಾಗು ಕರ್ನಾಟಕದ ರೈತರು ಕೃಷಿ ಸಾಲ ಪಡೆಯುವುದಕ್ಕಾಗಿ ಈ ಸಮಸ್ಯೆ ಸರಿಪಡಿಸಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶಿಸಬೇಕೆಂದು ವಿನಂತಿಸಲಾಗಿದೆ ಎನ್ನಲಾಗಿದೆ.