ಮಧ್ಯಪ್ರದೇಶ,ನ.29(DaijiworldNews/TA): ಖಾಂಡ್ವಾದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ ನಗರದ ಕ್ಲೋ ಟವರ್ನಲ್ಲಿ ಮೆರವಣಿಗೆ ಮುಕ್ತಾಯಗೊಳ್ಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಖಾಂಡ್ವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ರೈ ತಿಳಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇವರಲ್ಲಿ 18 ಮಂದಿಯನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಮನೆಗೆ ಕಳುಹಿಸಲಾಗಿದೆ. ಉಳಿದ 12 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ನವೆಂಬರ್ 28, 2009 ರಂದು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಸದಸ್ಯರಿಂದ ಹತ್ಯೆಯಾದ ಪೊಲೀಸ್ ಸೀತಾರಾಮ್ ಬಾಥಮ್ ಸೇರಿದಂತೆ ಮೂವರ ಸ್ಮರಣಾರ್ಥ ಪ್ರತಿ ವರ್ಷ ಪಂಜಿನ ಮೆರವಣಿಗೆಯನ್ನು ನಡೆಸಲಾಗುತ್ತದೆ ಈ ವೇಳೆ ಈ ಬಾರಿ ದುರಂತ ಸಂಭವಿಸಿದೆ.