ಬೆಂಗಳೂರು, ನ.29(DaijiworldNews/AA): ಯಡಿಯೂರಪ್ಪನವರ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತನಿಖೆ ಆಗಬೇಕು ಎಂಬ ಪ್ರಯತ್ನ ಮಾಡಿರುವುದು ಖಂಡನೀಯ. ಅಲ್ಲದೇ ತನಿಖೆ ಮಾಡಬೇಕು ಎನ್ನುವುದು ದ್ವೇಷದ ರಾಜಕಾರಣ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ಕ್ಯಾಬಿನೆಟ್ ತೆಗೆದುಕೊಂಡ ನಿರ್ಧಾರ ಖಂಡನೀಯ. ದ್ವೇಷದ ರಾಜಕೀಯ ಕೈಬಿಟ್ಟು ನಿಮ್ಮ ಆಡಳಿತ ಹೇಗೆ ಉತ್ತಮ ಮಾಡುವುದು ಎಂಬ ಬಗ್ಗೆ ಯೋಚಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದಿನ ನಮ್ಮ ಸರ್ಕಾರದ ಮೇಲೆ ತನಿಖೆ ಶುರು ಮಾಡಿದ್ದಾರೆ. ತನಿಖೆಗೆ ಆದೇಶ ನಾಗಮೋಹನ್ ದಾಸ್ ಸಮಿತಿ ಮಾಡಿ ಒಂದೂವರೆ ವರ್ಷ ಆಯ್ತು. ಅವರ ಆರೋಪ ನಿರಾಧಾರ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಹೇಳಿದರು.