ಮುಂಬೈ, ನ.30(DaijiworldNews/AK):ಮಹಾರಾಷ್ಟ್ರದ ನೂತನ ಮಹಾಯುತಿ ಸರಕಾರ ಡಿಸೆಂಬರ್ 5 ರಂದು ಸಂಜೆ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಪ್ರಕಟಿಸಿದೆ.

ಮುಖ್ಯಮಂತ್ರಿ ಯಾರೆಂಬುದರ ಕುರಿತು ಇನ್ನೂ ಯಾವುದೇ ಘೋಷಣೆಯಾಗದಿದ್ದರೂ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಮತ್ತು ಕಳೆದ ಏಕನಾ ಥ್ ಶಿಂಧೆ ನೇತೃತ್ವದ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವಿಸ್ ಅವರು ಉನ್ನತ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ನಿಯೋಜಿತ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಶಿಂಧೆ, ನೂತನ ಸರಕಾರ ರಚನೆಯಾಗುತ್ತಿರುವ ವೇಳೆ ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳಿವೆ.ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಡಿಸೆಂಬರ್ 2 ರಂದು ಸಭೆ ನಡೆಯಲಿದ್ದು, ಫಡ್ನವೀಸ್ ಅವರಿಗೆ ಈ ಬಾರಿ ಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
.