ಬೆಂಗಳೂರು, ಡಿ.01(DaijiworldNews/AA): ಬಿಜೆಪಿಯೊಳಗಿನ ಬಣ ಕಿತ್ತಾಟ ಜೋರಾಗಿದ್ದು, ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಹೈಕಮಾಂಡ್ ನೋಟಿಸ್ ನೀಡಿದೆ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು ಯತ್ನಾಳ್ಗೆ ನೋಟಿಸ್ ನೀಡಿದ್ದು, ಯತ್ನಾಳ್ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಹೈಕಮಾಂಡ್ ಕೇಳಿದೆ. ಈ ಮೂಲಕ ಕೊನೆಗೂ ಭಿನ್ನಮತಕ್ಕೆ ತೆರೆ ಎಳೆಯಲು ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಯತ್ನಾಳ್ ಬಣ ವಿಜಯೇಂದ್ರ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಇತ್ತ ವಿಜಯೇಂದ್ರ ಬೆಂಬಲಕ್ಕೆ ನಿಂತಿರುವ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಬಣ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿದೆ.