ನವದೆಹಲಿ, ಡಿ.04(DaijiworldNews/AA): ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾವಣೆ ಮಾಡುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಸ್ಪಷ್ಟನೆ ನೀಡಿದರು.

ಈ ಬಗ್ಗೆ ಲೋಕಸಭೆಯಲ್ಲಿ ಇಂದು ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್ ಅವರು, 'ಆ ರೀತಿಯ ಯಾವುದೇ ಪ್ರಸ್ತಾವ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ' ಎಂದು ತಿಳಿಸಿದರು.
ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡುವಂತೆ ನಿರ್ದೇಶನ ನೀಡಲಾಗುತ್ತಿದೆ. ಹುದ್ದೆಗಳ ಭರ್ತಿಗೆ 'ರೋಜಗಾರ್ ಮೇಳ' ಆಯೋಜಿಸಲಾಗುತ್ತಿದೆ ಎಂದರು. ಇನ್ನು ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಈಗ 60 ವರ್ಷವಿದೆ.