ಶಿವಮೊಗ್ಗ, ಡಿ.04(DaijiworldNews/AA): ಶಾಸಕ ಬಸನಗೌಡ ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಪಕ್ಷದೊಳಗಿನ ಎಲ್ಲಾ ಭಿನ್ನಮತಗಳನ್ನು ವಿವಾದಗಳನ್ನು ಹೈಕಮಾಂಡ್ ಬಗೆಹರಿಸಲಿದೆ ಎಮದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮೂಡ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ. ನಿವೇಶನ ವಾಪಾಸ್ಸು ನೀಡಿದ್ದರೂ ಅಪರಾಧ ಅಪರಾಧವೇ ಆಗಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಬೀದರ್ನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಯತ್ನಾಳ್ ವಿಚಾರದಲ್ಲಿ ವರಿಷ್ಠರ ತೀರ್ಮಾನಕ್ಕೆ ತಾವು ಬದ್ಧ ಎಂದು ತಿಳಿಸಿದ್ದಾರೆ.