ನವದೆಹಲಿ,ಡಿ.06 (DaijiworldNews/AK): ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಪ್ರತಿಭಟನೆ ಹಿನ್ನೆಲೆ ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.
ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ದೆಹಲಿಯ ಸಂಸತ್ ಭವನಕ್ಕೆ ಪಾದಯಾತ್ರೆ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.
ರೈತರ ಬೇಡಿಕೆಗಳಾದ ಎಂಎಸ್ಪಿಗೆ ಕಾನೂನುಬದ್ಧ ಖಾತರಿ, ರೈತರು ಸಾಲ ಮನ್ನಾ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ, ವಿದ್ಯುತ್ ದರವನ್ನು ಹೆಚ್ಚಿಸಬಾರದು, 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ, 2013 ರ ಭೂ ಸ್ವಾಧೀನ ಕಾಯಿದೆಯನ್ನು ಮರುಸ್ಥಾಪಿಸಲು ಒತ್ತಾಯ, 2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯ ಮಾಡಲಾಗಿದೆ.