ಬಳ್ಳಾರಿ, ಡಿ.07(DaijiworldNews/AA): ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಆಸ್ಪತ್ರೆಯ ಮೇಲೆ ಅಧಿಕಾರಿಗಳು ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್ನಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಐವಿ ಹಾಗೂ ಆರ್ಎಲ್ ಫ್ಲೂಯಿಡ್ ಔಷಧಿ ಬಂದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಐವಿ ದ್ರಾವಣ ಹಾಗೂ ಬಾಣಂತಿಯರ ಅಸ್ವಸ್ಥ ಆದ ಬಗ್ಗೆ ಹಾಗೂ ರಿಯಾಕ್ಷನ್ ಆಗಿರುವ ಗ್ಲುಕೋಸ್, ಸೀಜ್ ಆಗಿರುವ ೨೮೦ ಐವಿ ಫ್ಲೂಯಿಡ್ ಆರ್ಎಲ್ ಬಾಟಲ್ ಬಗ್ಗೆಯೂ ಮಾಹಿತಿ ಕಲೆ ಹಾಕಿದ್ದಾರೆ.