ಹುಬ್ಬಳ್ಳಿ, ಡಿ.08(DaijiworldNews/AA): ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ನಿಜ. ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧ ಕೊಟ್ಟ ಕಂಪನಿ ಬ್ಲಾಕ್ ಲಿಸ್ಟ್ಗೆ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಒಂದು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಬಳಿಕ ಮುಂದಿನ ಕ್ರಮಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದರು.