ನವದೆಹಲಿ, ಡಿ.09(DaijiworldNews/AA): ಭಾರತೀಯ ರಿಸರ್ವ್ ಬ್ಯಾಂಕ್ ನೂತನ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಿಸಲಾಗಿದೆ.

ಹಾಲಿ ಗರ್ವನರ್ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಮುಕ್ತಾಯವಾಗಲಿದೆ. ಇದರ ಬೆನ್ನಲ್ಲೇ ಡಿಸೆಂಬರ್ 11ರಂದು ರಿಸರ್ವ್ ಬ್ಯಾಂಕ್ನ ಮುಂದಿನ ಗವರ್ನರ್ ಆಗಿ ಮಲ್ಹೋತ್ರಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮುಂದಿನ 3 ವರ್ಷಗಳ ಕಾಲ ಮಲ್ಹೋತ್ರಾ ಅವರು ಕೇಂದ್ರೀಯ ಬ್ಯಾಂಕ್ ಅನ್ನು ಮುನ್ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ಬಳಿಕ, ಆರ್ಬಿಐನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್ ನೇಮಕಗೊಂಡಿದ್ದರು. 3 ವರ್ಷ ಅಧಿಕಾರ ಪೂರ್ಣಗೊಳಿಸಿದ ನಂತರ 2ನೇ ಅವಧಿಗೂ ಅವರನ್ನ ಮುಂದುವರಿಸಲಾಗಿತ್ತು. ಇದೀಗ ಅವರ ಸ್ಥಾನಕ್ಕೆ ಸಂಜಯ್ ಮಲ್ಹೋತ್ರಾ ಅವರು ನೇಮಕಗೊಂಡಿದ್ದಾರೆ.