ಬೆಂಗಳೂರು,10(DaijiworldNews/AK): ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇ ಶಾಂಗ ಸಚಿವ ಎಸ್.ಎಂ .ಕೃಷ್ಣ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಮಹತ್ವಪೂರ್ಣ ಕಾರ್ಯಗಳನ್ನು ಕೈಗೊಂಡು, ಕೇಂದ್ರ ಸಚಿವರಾಗಿ, ರಾಜ್ಯದ ಮಂತ್ರಿಯಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ದೇ ಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಕೃಷ್ಣ ಅವರ ಕುಟುಂಬ ವರ್ಗಕ್ಕೆ ಅತೀವ ಸಂತಾಪಗಳು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿ ಸುತ್ತೇನೆ ಎಂದು ತಿಳಿಸಿದ್ದಾರೆ.