ಕಾರವಾರ, ಡಿ.10(DaijiworldNews/AA): ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಬಾಲಕರು ಸಮುದ್ರ ಪಾಲಾದ ಘಟನೆ ಭಟ್ಕಳದ ಮುರ್ಡೇಶ್ವರದಲ್ಲಿ ಇಂದು ಸಂಜೆ ನಡೆದಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ಶಾಲೆ ವತಿಯಿಂದ ಒಟ್ಟು 54 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದು, ಇಂದು ಸಂಜೆ ಮುರ್ಡೇಶ್ವರ ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಇನ್ನುಳಿದ ಮೂವರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.