ಮುಂಬೈ, ಡಿ.11(DaijiworldNews/AA): ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಇಂದು ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್ಬಿಐ ತಿಳಿಸಿದೆ.
2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, ಆರ್ಬಿಐನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅಧಿಕಾರ ವಹಿಸಿಕೊಂಡಿದ್ದರು. 3 ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು. ಇದೀಗ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆ ಮಲ್ಹೋತ್ರಾ ಅವರು ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.