ಕಾರವಾರ,ಡಿ.12(DaijiworldNews/AK): ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.
ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.