ಬೆಳಗಾವಿ, , ಡಿ.12(DaijiworldNews/AK):ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯದ ಮಾಜಿ ಸಚಿವರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಮೀಸಲಾತಿ ನೀಡದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಪ್ರಾಣ ಕೊಟ್ಟೇವು ಮೀಸಲಾತಿ ಬಿಡೆವು, ಹೋರಾಟಗಾರರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಇವೇ ಮೊದಲಾದ ಭಿತ್ತಿಪತ್ರಗಳನ್ನು ಹಿಡಿದಿದ್ದ ಶಾಸಕರು, ವಿಧಾನಪರಿಷತ್ ಸದಸ್ಯರು ಸರಕಾರದ ಧೋರಣೆಯನ್ನು ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿದರು.