ನವದೆಹಲಿ, ಡಿ.12(DaijiworldNews/AA): ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಇಂದು ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಡಳಿತಾರೂಢ ಬಿಜೆಪಿ ಸರ್ಕಾರವು 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ತಿಳಿಸಿದೆ.
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ ಎನ್ನಲಾಗಿದೆ.