ರಾಯ್ಪುರ್, ಡಿ.12(DaijiworldNews/AA): ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಕನಿಷ್ಠ 7 ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಜಂಟಿ ತಂಡವು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವಾಗ ದಕ್ಷಿಣ ಅಬುಜ್ಮದ್ನ ಕಾಡಿನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಿಆರ್ಪಿಎಫ್ ತಂಡಗಳಲ್ಲದೆ ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸ್ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗುಂಡಿನ ಚಕಮಕಿ ಬಳಿಕ ಸಮವಸ್ತ್ರ ಧರಿಸಿದ್ದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.