ಬೆಳಗಾವಿ, ಡಿ.13(DaijiworldNews/AK):ಮುಖ್ಯಮಂತ್ರಿಗಳಿಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇದೆಯೇ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಘಟನೆಯನ್ನು ತೀವ್ರವಾಗಿ ಖಂಡಿಸಿದರು.ಪಂಚಮಸಾಲಿ ಸಮಾಜದ ಬೇಡಿಕೆಗಳನ್ನು ಚರ್ಚಿಸುವುದಾಗಿ ಸಿಎಂ ಅವರು ಸದನದಲ್ಲಿ ಹೇಳಿದ್ದಾರೆ. ಮತ್ತೊಂದು ಕಡೆ ಹೋರಾಟವನ್ನು ಹತ್ತಿಕ್ಕುವ ಕೆಲಸ, ಸರಕಾರದ ನಡೆ ಅತ್ಯಂತ ಖಂಡನಾರ್ಹ ಎಂದು ಆಕ್ಷೇಪಿಸಿದರು.
ಮುಖ್ಯಮಂತ್ರಿಗಳು, ಸರಕಾರದ ಕುಮ್ಮಕ್ಕಿನಿಂದ ಲಾಠಿ ಪ್ರಹಾರ ನಡೆದಿದ್ದು ಇದು ಅಕ್ಷಮ್ಯ ಅಪರಾಧ ಎಂದು ತಿಳಿಸಿದರು.