ಬೆಂಗಳೂರು, ಡಿ.15(DaijiworldNews/AA): ರಾಜ್ಯಾದ್ಯಂತ ಶನಿವಾರ ನಡೆದ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಸಾವಿರಾರು ಪ್ರಕರಣಗಳು ರಾಜಿ-ಸಧಾನದ ಮೂಲಕ ಇತ್ಯರ್ಥವಾಗಿವೆ.

ಕೊಪ್ಪಳ ಜಿಲ್ಲೆಯ ನಾಲ್ಕು ನ್ಯಾಯಾಲಯಗಳಲ್ಲಿನ ಲೋಕ ಆದಾಲತ್ ಕಾರ್ಯಕ್ರಮದಲ್ಲಿ 1 ಸಾವಿರದ 949 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿವೆ. 5 ಕೋಟಿ 58 ಲಕ್ಷ ಹಣವನ್ನು ಲೋಕ ಆದಾಲತ್ ನಿಂದ ಸರ್ಕಾರಕ್ಕೆ ಜಮಾ ಮಾಡಲಾಗಿದ್ದು ವಿವಾಹ ವಿಚ್ಚೇನದ ಕೋರಿದ್ದ ಎರಡು ಜೋಡಿಗಳು ಪರಸ್ಪರ ರಾಜಿಯಾಗುವ ಮೂಲಕ ಒಂದಾಗಿದ್ದಾರೆ.
ದಾವಣಗೆರೆ ಜಿಲ್ಲೆಯ 24 ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್ನಲ್ಲಿ ವಿಚಾರಣೆಗೆ ಬಾಕಿ ಇದ್ದ 6 ಸಾವಿರದ 492 ಪ್ರಕರಣಗಳನ್ನು ರಾಜಿ ಮತ್ತು 2 ಲಕ್ಷದ 46 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣವರ ತಿಳಿಸಿದ್ದಾರೆ. ಇದೇ ವೇಳೆ ವಿವಾಹ ವಿಚ್ಛೇದನ ಮತ್ತು ಜೀವನಾಂಶ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಾಜ್ಯಗಳಲ್ಲಿ 31 ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲಾಗಿದೆ.
ಯಾದಗಿರಿ ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 10 ಪೀಠಗಳಲ್ಲಿ 15 ಸಾವಿರದ 532 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ರೇಖಾ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 4 ಸಾವಿರದ 626 ಪ್ರಕರಣ ಹಾಗೂ ವ್ಯಾಜ್ಯಪೂರ್ವ 10 ಸಾವಿರದ 936 ಕಂದಾಯ, ಮೋಟರ್ ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳನ್ನು ಸೇರಿ ಒಟ್ಟು 15 ಸಾವಿರದ 532 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 49 ಸಾವಿರದ 79 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 10 ಸಾವಿರದ 113 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಇತ್ಯರ್ಥ ಮಾಡಲಾಯಿತು ಎಂದು ಜಿಲ್ಲಾ ಮತ್ತು ಸೆಷನ್ಸ್ ಪ್ರಧಾನ ನ್ಯಾಯಾಧೀಶ ಜಿ.ಎ.ಮಂಜುನಾಥ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ವರದಾನವಾಗಿದೆ ಎಂದು ದಾವಣಗೆರೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.
ಹರಿಹರ ತಾಲ್ಲೂಕಿನ ನಂದಿಗುಡಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಚೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಆರೋಗ್ಯ ಯೋಜನೆಗಳ ಕುರಿತು ವಿದ್ಯಾರ್ಥಿಗಳು ಪೋಷಕರಿಗೆ ಮಾಹಿತಿ ನೀಡುವ ಮೂಲಕ ಆರೋಗ್ಯವಂತ ಕುಟುಂಬ ನಿರ್ಮಾಣಕ್ಕೆ ಕೊಡುಗೆ ನೀಡಬೇಕೆಂದು ಕರೆ ನೀಡಿದರು. .
ಉಡುಪಿಯಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾರತಿ ಶಿವಪುತ್ರ ರಾಯಣ್ಣನವರ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜೊಯಾಲಿನ್ ಮೆಂಡೋನ್ಸಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವರ್ಣಶ್ರೀ ಅವರು ರಾಜೀ ಸಂಧಾನದ ಮೂಲಕ ಬಗೆಹರಿಸಬಹುದಾದ ಸುಮಾರು 756 ಪ್ರಕರಣಗಳನ್ನು ಇತ್ಯರ್ಥಪಡಿಸಿದರು.