ಶಿವಮೊಗ್ಗ, ಡಿ.15(DaijiworldNews/TA) : ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ , ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ ಎಂಬುವುದಾಗಿ ಅವರು ಹೇಳಿದರು.
ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದು ಎಂಬ ನಿರೀಕ್ಷೆ ಇದೆ. ಏನು ಆಗಲಿದೆ ಎಂಬುವುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದರು.