ಮುಂಬೈ,ಡಿ.15(DaijiworldNews/TA) : ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಮಹಾರಾಷ್ಟ್ರ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಇಂದು ನಡೆಯಿತು. ನಾಗ್ಪುರದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಒಟ್ಟು 39 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಹೊಸದಾಗಿ ಸೇರ್ಪಡೆಗೊಂಡ ಸಚಿವರಲ್ಲಿ 19 ಮಂದಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಒಂಬತ್ತು ಮಂದಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮತ್ತು 11 ಮಂದಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಸೇರ್ಪಡೆಯಾಗಿದ್ದಾರೆ.
ಮಹಾಯುತಿಯಲ್ಲಿ ಅತಿ ದೊಡ್ಡ ಪಕ್ಷವಾದ ಬಿಜೆಪಿ 16 ಕ್ಯಾಬಿನೆಟ್ ಸ್ಥಾನ ಪಡೆದುಕೊಂಡರೆ, ಶಿವಸೇನೆ 9, ಎನ್ಸಿಪಿ 8 ಸ್ಥಾನ ಪಡೆದುಕೊಂಡಿದೆ. ಬಿಜೆಪಿಯ ಮೂವರು, ಶಿವಸೇನೆಯ ಇಬ್ಬರು ಮತ್ತು ಎನ್ಸಿಪಿಯ ಒಬ್ಬರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.