ನವದೆಹಲಿ, ಡಿ.19(DaijiworldNews/AA): ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ನಾಯಕ. ಆದರೆ, ಎಳೆ ಮಕ್ಕಳಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಇತಿಹಾಸ ಇರುವ ಕುಟುಂಬ ಅಂತಾ ಏನೇನೋ ಮಾಡಲು ಸಾಧ್ಯವಿಲ್ಲ. ಜನರು ಅದನ್ನು ಒಪ್ಪುವುದಿಲ್ಲ. ಸಂವಿಧಾನ ಮುಖ್ಯ ಎನ್ನುವುದಕ್ಕೆ ಎರಡು ದಿನ ಚರ್ಚೆಗೆ ಅವಕಾಶ ಮಾಡಿಕೊಡಲಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚುವ ಕೆಲಸ ಮಾಡಿದೆ. ಅಂಬೇಡ್ಕರ್ ಅವರ ಜೊತೆಗೆ ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಅಂಬೇಡ್ಕರ್ ಅವರನ್ನು ಹೀಯಾಳಿಸುವ ಕೆಲಸ ಆಗಿಲ್ಲ. ಬಿಜೆಪಿ ಅಪಾರವಾದ ಗೌರವ ಇಟ್ಟುಕೊಂಡಿದೆ ಎಂದು ಅಮಿತ್ ಶಾ ಅವರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.