ಗುರುಗ್ರಾಮ, ಡಿ.20(DaijiworldNews/AA): ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ನಾಯಕ ಮತ್ತು ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ(89) ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಓಂ ಪ್ರಕಾಶ್ ಚೌಟಾಲಾ ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಹರಿಯಾಣ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿರುವ ಓಂ ಪ್ರಕಾಶ್ ಚೌಟಾಲಾ ಡಿಸೆಂಬರ್ 1989ರಿಂದ 4 ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಕೊನೆಯ ಬಾರಿ 1999 ರಿಂದ 2005ರವರೆಗೆ ಸಿಎಂ ಆಗಿದ್ದರು. ಅವರು ಹರಿಯಾಣದ ಶಾಸಕರಾಗಿ ಸುದೀರ್ಘ ಸೇವೆ ಸಲ್ಲಿಸಿದ ನಾಯಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ