ನವದೆಹಲಿ, ,ಡಿ.24(DaijiworldNews/AK): ಕಾಂಗ್ರೆಸ್ ಬಿ.ಆರ್ ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ, ದಲಿತ ಮತ್ತು ಹಿಂದುಳಿದ ಸಮುದಾಯಗಳನ್ನು ನಿರ್ಲಕ್ಷಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತಾದ ವಿವಾದಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಬಿ.ಆರ್ ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ, ದಲಿತ ಮತ್ತು ಹಿಂದುಳಿದ ಸಮುದಾಯಗಳನ್ನು ನಿರ್ಲಕ್ಷಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
ಅಂಬೇಡ್ಕರ್ ಅವರ ಚುನಾವಣಾ ಸೋಲಿಗೆ ಕಾಂಗ್ರೆಸ್ ಸಂಚು ರೂಪಿಸಿತ್ತು. ಅವರ ಗೌರವಾರ್ಥ ಸ್ಮಾರಕಗಳನ್ನು ಸ್ಥಾಪಿಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.