ಬೆಂಗಳೂರು, ಡಿ.24(DaijiworldNews/AK):ಎಂಎಲ್ಸಿ ಸಿ.ಟಿ.ರವಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜಭವನದ ಮೆಟ್ಟಿಲೇರಿದೆ. ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಸಿಟಿ ರವಿ ಅವರನ್ನ ರಾಜ್ಯ ಸರ್ಕಾರ ನಡೆಸಿಕೊಂಡು ರೀತಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.ಈ ಪ್ರಕರಣದ ತನಿಖಗೆ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಇತ್ತ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಶಾಸಕರಾದ ಜನಾರ್ದನರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ಹಾವೇರಿ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್ ಅವರು ರಾಜಭವನದಲ್ಲಿ ಗವರ್ನರ್ ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದರು.