ನವದೆಹಲಿ,ಡಿ.27(DaijiworldNews/TA): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂತಾಪ ಸೂಚಿಸಿದ್ದಾರೆ. ನಂತರ ಸಿಂಗ್ ಅವರು ಭಾರತದ ವಿದೇಶಾಂಗ ನೀತಿಗೆ "ಕಾರ್ಯತಂತ್ರದ ತಿದ್ದುಪಡಿಗಳನ್ನು" ಮಾಡಿದ್ದಾರೆ ಎಂದು ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. "ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖವಾಗಿದೆ" ಎಂದು ಜೈಶಂಕರ್ ಎಕ್ಸ್ ನಲ್ಲಿ ಹೇಳಿದ್ದಾರೆ.

"ಭಾರತೀಯ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಎಂದು ಪರಿಗಣಿಸಲ್ಪಟ್ಟಿದ್ದರೂ, ನಮ್ಮ ವಿದೇಶಾಂಗ ನೀತಿಯ ಕಾರ್ಯತಂತ್ರದ ತಿದ್ದುಪಡಿಗಳಿಗೆ ಅವರು ಸಮಾನವಾಗಿ ಜವಾಬ್ದಾರರಾಗಿದ್ದರು. ಅವರ ದಯೆ ಮತ್ತು ಸೌಜನ್ಯವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ." ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಹೇಳಿದರು.
ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಡಾ. ಸಿಂಗ್ ಅವರು ಗುರುವಾರ ರಾತ್ರಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಅವರು ಬಳಲುತ್ತಿದ್ದರು.