ನವದೆಹಲಿ,ಡಿ.27(DaijiworldNews/AK): ದೇಶದ ಅಭಿವೃದ್ಧಿಯ ಹರಿಕಾರ, ಆರ್ಥಿಕತೆಯ ವಾಸ್ತುಶಿಲ್ಪಿ, ರಾಜಕಾರಣಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಪತ್ನಿ ಗುರ್ಶನ್ ಕೌರ್, ಮೂವರು ಪುತ್ರಿಯರನ್ನು ಸಿಂಗ್ ಅಗಲಿದ್ದಾರೆ. ಅಮೆರಿಕದಲ್ಲಿರುವ ಪುತ್ರಿ ಆಗಮನಕ್ಕಾಗಿ ಕಾಯಲಾಗ್ತಿದೆ.
ನಾಳೆ (ಶನಿವಾರ) ಬೆಳಗ್ಗೆ 8 ಗಂಟೆಗೆ ದೆಹಲಿ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನ ರವಾನೆ ಮಾಡಿ ಬೆಳಗ್ಗೆ 9:30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
9:30ರ ಬಳಿಕ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸುಮಾರು 11:45ಕ್ಕೆ ನಿಗಮ್ಬೋಧ್ ಘಾಟ್ನಲ್ಲಿ ಸರ್ಕಾರಿ ಮತ್ತು ಸೇನಾಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಅಂತ ಕೇಂದ್ರ ಗೃಹ ಇಲಾಖೆ ತಿಳಿಸಿದೆ.