ಬೆಂಗಳೂರು, ಡಿ.31 (DaijiworldNews/AK):ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು.

ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಎಲ್ಲರನ್ನೂ ಇದೇವೇಳೆ ಬಂಧಿಸಲಾಯಿತು.