ಬೆಂಗಳೂರು,ಡಿ.31 (DaijiworldNews/AK): ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ 8 ಪುಟಗಳ ದೂರು ನೀಡಿದ್ದಾರೆ.

ನಗರದ ಡಿಜಿಪಿ ಕಚೇರಿಯಲ್ಲಿ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮತ್ತು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ವಿರುದ್ಧ ಆರೋಪ ಮಾಡಿದ್ದಾರೆ.
ತಮ್ಮನ್ನು ಎತ್ತಿ ಪಶುವಿನ ರೀತಿ ಕಿಡ್ನ್ಯಾಪ್ ಮಾಡಿದ್ದಾರೆಂದು ಬೆಳಗಾವಿ ಪೊಲೀಸ್ ಕಮಿಷನರ್, ಎಸ್ಪಿ ವಿರುದ್ಧ ಸಿ.ಟಿ.ರವಿ ಆರೋಪ ಮಾಡಿದ್ದಾರೆ. ಇಡೀ ಸನ್ನಿವೇಶ ಫೇಕ್ ಎನ್ಕೌಂಟರ್ ರೀತಿ ಇತ್ತು. ಲೈಸೆನ್ಸ್ಡ್ ಸುಪಾರಿ ಕಿಲ್ಲರ್ಗಳ ರೀತಿ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.