ಬೆಂಗಳೂರು, ಜ.03 (DaijiworldNews/AK): ಐಶ್ವರ್ಯ ಗೌಡ ಕೇಸ್ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ಕುರಿತು ಇದೀಗ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್ಡಿಕೆ , ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ದಾರೆ. ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದು ಹೇಳಿದರು.
2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿದರು.