ಶ್ರೀನಗರ,ಜ.04(DaijiworldNews/TA): ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶನಿವಾರ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ ಮೂವರು ಯೋಧರು ಮೃತಪಟ್ಟಿದ್ದಾರೆ.

ಮಧ್ಯಾಹ್ನ 2.30 ರ ಸುಮಾರಿಗೆ ಎಸ್ಕೆ ಪೇಯೆನ್ ಪ್ರದೇಶದ ಬಳಿ ಸಂಭವಿಸಿದ ಅಪಘಾತದಲ್ಲಿ ಕೆಟ್ಟ ಹವಾಮಾನವು ಒಂದು ಪಾತ್ರವನ್ನು ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ಮೂವರು ಧೈರ್ಯಶಾಲಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಭಾರತೀಯ ಸೇನೆಯು ದುಃಖತಪ್ತ ಕುಟುಂಬಗಳಿಗೆ ಸೇನೆ ಸಂತಾಪವನ್ನು ವ್ಯಕ್ತಪಡಿಸಿದೆ.
ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಅವರು ಪ್ರಯಾಣಿಸುತ್ತಿದ್ದ ಟ್ರಕ್ 300 ಅಡಿ ಕಮರಿಗೆ ಉರುಳಿ ಐವರು ಸೈನಿಕರು ಸಾವನ್ನಪ್ಪಿದರು ಮತ್ತು ಐವರು ಗಾಯಗೊಂಡಿದ್ದರು.