ಬೆಂಗಳೂರು, ಜ.06 (DaijiworldNews/AK):ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ . ಇನ್ನು 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಇನ್ನು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ನಗರದಲ್ಲಿ ಹೆಚ್ಎಂಪಿವಿಯಿಂದ ಸೋಂಕಿತವಾಗಿರುವ ಮಗುವಿನ ಅರೋಗ್ಯ ಸ್ಥಿರವಾಗಿದೆ. ಭೀತಿಗೊಳಗಾಗುವ ಸನ್ನಿವೇಶವೇನೂ ಇಲ್ಲ ಎಂದರು .
ವೈರಸ್ ಚೀನಾದಲ್ಲಿ ಪತ್ತೆಯಾಗಿರುವ ಕಾರಣ ಜನರಲ್ಲಿ ಭಯ ಇದೆ. ಧಾವಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರೋದು ಬೇಡ, ಕೇಂದ್ರ ಸರ್ಕಾರ ಮತ್ತು ಐಸಿಎಂಆರ್ ಇದುವರಗೆ ಮಾರ್ಗಸೂಚಿಗಳನ್ನು ಜಾರಿಮಾಡಿಲ್ಲ, ಅಧಿಕಾರಿಗಳೊಂದಿಗೆ ಮಾತಾಡಿ ನಿರಂತರವಾಗಿ ಐಸಿಎಂಆರ್ ಜೊತೆ ಸಂಪರ್ಕದಲ್ಲಿರುವಂತೆ ತಿಳಿಸುವೆ ಎಂದು ಹೇಳಿದರು.
ಎಲ್ಲಾ ಕಡೆ ಟೆಸ್ಟ್ ಮಾಡಿದರೂ ಮಕ್ಕಳು, ವಯಸ್ಸಾದವರಲ್ಲೂ ಸಿಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.