ಚೆನ್ನೈ, ಜ.07 (DaijiworldNews/AK): ಹೈ-ಸ್ಪೀಡ್ ರೇಸಿಂಗ್ ಅಭ್ಯಾಸದ ಸಮಯದಲ್ಲಿ ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಯಿತು. ನಟ ಅಪಾಯದಿಂದ ಪಾರಾಗಿದ್ದಾರೆ .

ಮುಂಬರುವ 24H ದುಬೈ 2025 ರೇಸಿಂಗ್ ಅಭ್ಯಾಸದ ಸಮಯದಲ್ಲಿ ಈ ಘಟನೆ ನಡೆದಿದೆ. ಅಪಘಾತ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಜಿತ್ ಅವರ ಕಾರು ನಿಲುಗಡೆಗೆ ಬರುವ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರನ್ನು ರಕ್ಷಿಸಲು ಕೆಲವರು ಧಾವಿಸಿದ್ದರು. ಯಾವುದೇ ಅಪಾಯವಾಗದೇ ನಟ ಕಾರಿನಿಂದ ಹೊರಬಂದಿದ್ದಾರೆ.