ದೆಹಲಿ, ಜ.16 (DaijiworldNews/AA): ಪಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಕೃಷ್ಣನ್ ವಿನೋದ್ ಚಂದ್ರನ್ ಅವರು ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಳೆದ ವಾರ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸ್ಸಿನ ಮೇರೆಗೆ ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಜನವರಿ 14ರಂದು ಅಧಿಸೂಚನೆ ಹೊರಡಿಸಿತ್ತು.
11 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರು ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2023 ರಂದು ಪಾಟ್ನಾದಲ್ಲಿ ನ್ಯಾಯಾಂಗದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುತ್ತಾರೆ.
ಇನ್ನು ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಮೂರ್ತಿ ಚಂದ್ರನ್ ಅವರ ಅಧಿಕಾರಾವಧಿ 2028ರ ಏಪ್ರಿಲ್ 25ಕ್ಕೆ ಮುಕ್ತಾಯಗೊಳ್ಳಲಿದೆ.