ರಾಯ್ಪುರ,ಜ.17 (DaijiworldNews/AK): ನಕ್ಸಲರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.

ನಕ್ಸಲ್ ಕೇಂದ್ರಿತ ಪ್ರದೇಶವಾದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ನಲ್ಲಿ ಘಟನೆ ನಡೆದಿದೆ. ಗಾರ್ಪಾ ಗ್ರಾಮದ ಬಳಿ ಭದ್ರತಾ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.