ನವದೆಹಲಿ, ಜ.18 (DaijiworldNews/AA): ಬಿಜೆಪಿಯ ಪರ್ವೇಶ್ ವರ್ಮಾ ಅವರ ಬೆಂಬಲಿಗರು ದೆಹಲಿ ಮಾಜಿ ಸಿಎಂ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಪಕ್ಷ (ಎಎಪಿ) ಶನಿವಾರ ಆರೋಪ ಮಾಡಿದೆ.

ಆದರೆ ಎಎಪಿ ಮಾಡಿರುವ ಆರೋಪಗಳನ್ನು ಪರ್ವೇಶ್ ವರ್ಮಾ ಅವರು ತಳ್ಳಿಹಾಕಿದ್ದಾರೆ. ಕೇಜ್ರಿವಾಲ್ ಅವರ ಕಾರು ಬಿಜೆಪಿ ಕಾರ್ಯಕರ್ತನ ಮೇಲೆ ಹರಿದಿದ್ದು, ಪರಿಣಾಮ ಆತನ ಕಾಲು ಮುರಿದಿದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಕೇಜ್ರಿವಾಲ್ ಅವರ ಕಾರು ಬಿಜೆಪಿಯ ಕಾರ್ಯಕರ್ತನ ಮೇಲೆ ಹರಿದಿದ್ದು, ಆತನ ಕಾಲು ಮುರಿದಿದೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ನಾನು ಆತನ ಆರೋಗ್ಯ ವಿಚಾರಿಸಲು ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿಗೆ ಹೋಗುತ್ತಿದ್ದೇನೆ ಎಂದು ವರ್ಮಾ ತಿಳಿಸಿದ್ದಾರೆ.