ಬೆಂಗಳೂರು, ಜ.23(DaijiworldNews/AK): ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರು ವದಂತಿಯನ್ನು ಅಲ್ಲಗಳೆದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಎಂದು ಹೇಳಿದರು.
ದಾವೋಸ್ ಶೃಂಗಸಭೆ
ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.
ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ
ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.