ಬೆಂಗಳೂರು, ಜ.27 (DaijiworldNews/AK):ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ. ಈಗಾಗಲೇ ಇಡಿ ಸಹ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು,ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಆದ್ರೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸ್ನೇಹಮಯಿ ಕೃಷ್ಣ ಪರ ವಕೀಲ ಮಣೀಂದರ್ ಸಿಂಗ್ ವಾದ ಮಂಡನೆ ಮಾಡಿದ್ದರೆ, ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು.ಈ ವಾದ ಪ್ರತಿವಾದ ಆಲಿಸಿದ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ ಅವಧಿ ಗಡುವು ಸಹ ವಿಸ್ತರಿಸಿದೆ.