ಬಾಗ್ಪತ್, ಜ.28(DaijiworldNews/TA): ಮಂಗಳವಾರ 'ನಿರ್ವಾಣ ಲಡ್ಡು ಪರ್ವ್' ಸಮಯದಲ್ಲಿ ತಾತ್ಕಾಲಿಕ ವೇದಿಕೆ ಕುಸಿದು ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತು ಜೈನ ಶಿಷ್ಯರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥ್ ಅವರ ಗೌರವಾರ್ಥ ಈ ಕಾರ್ಯಕ್ರಮವನ್ನು ನಡೆಸಲಾಯಿತು.

ಕಿಕ್ಕಿರಿದ ಧಾರ್ಮಿಕ ಸಭೆಯಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡವರಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದರು. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ತಕ್ಷಣವೇ ಪ್ರಾರಂಭವಾಗಿತ್ತು.
ಘಟನೆ ವಿಚಾರವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದೂ ಅವರು ಹಾರೈಸಿದ್ದಾರೆ.