ನವದೆಹಲಿ, ಜ.28 (DaijiworldNews/AK):ಅರವಿಂದ್ ಕೇಜ್ರಿವಾಲ್ ಮೊದಲ ಬಾರಿಗೆ ದೆಹಲಿಯ ಮುಖ್ಯಮಂತ್ರಿಯಾದಾಗ ನೀಲಿ ಬಣ್ಣದ ವ್ಯಾಗನ್ ಆರ್ ಕಾರಿನಲ್ಲಿ ಬರುತ್ತಿದ್ದರು. ಆದರೆ, ಸಿಎಂ ಆದ ನಂತರ ಶೀಶ್ ಮಹಲ್ ಎಂಬ ಐಷಾರಾಮಿ ಬಂಗಲೆಯಲ್ಲಿ ವಾಸಿಸತೊಡಗಿದರು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪತ್ಪರ್ಗಂಜ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ತಮ್ಮ ಅಧಿಕೃತ ನಿವಾಸವಾದ ಶೀಶ್ ಮಹಲ್ ಅನ್ನು ನವೀಕರಿಸಲು ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ದಾರೆ ಎಂಬ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡ ಆರೋಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಅಧಿಕಾರಕ್ಕೆ ಬಂದ ಮೇಲೆ ಬೇರೆಯವರಿಗಿಂತಲೂ ವಿಭಿನ್ನವಾಗಿ ರಾಜಕೀಯ ಮಾಡುವುದಾಗಿ ಹೇಳಿದರು. ಮೊದಲು ಸಣ್ಣ ಕಾರಿನಲ್ಲಿ ಬಂದರು. ಆದರೆ ಈಗ ಶೀಶ್ ಮಹಲ್ನಲ್ಲಿ ವಾಸಿಸುತ್ತಿದ್ದರು ಎಂದು ರ್ಯಾಲಿಯಲ್ಲಿ ಹೇಳಿದರು.