ನವದೆಹಲಿ, ಫೆ.01 (DaijiworldNews/AA): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದು, ಇಂದು ೮ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ.

19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ ಮಾಡಲಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಇನ್ನು 2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ ಹೇಳಿದೆ.
ಬಜೆಟ್ ನಿರೀಕ್ಷೆಗಳು:
*ತೆರಿಗೆ ದರ ಕಡಿತ ಅಥವಾ ತೆರಿಗೆ ಸ್ತರದಲ್ಲಿ ಬದಲಾವಣೆ ಸಾಧ್ಯತೆ
*ಆದಾಯ ತೆರಿಗೆ ಕಾಯ್ದೆ ಸರಳೀಕರಣಕ್ಕೆ ನೇರ ತೆರಿಗೆ ಕೋಡ್ ಪರಿಚಯಿಸುವ ಸಾಧ್ಯತೆ
*ಆದಾಯ ತೆರಿಗೆ ವಿನಾಯಿತಿ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
*ಶೇ.30ರಷ್ಟು ತೆರಿಗೆ ಸ್ಲಾಬ್ನ ಆದಾಯ ಮಿತಿ 15ರಿಂದ 20 ಲಕ್ಷಕ್ಕೆ ಏರಿಕೆ
*ಗೃಹ ಸಾಲಗಳಿಗೆ ವಿಧಿಸಲಾಗುವ ತೆರಿಗೆಯ ವಿನಾಯಿತಿ ಮಿತಿಯಲ್ಲಿ ಹೆಚ್ಚಳ ಸಾಧ್ಯತೆ
*ಮಹಿಳೆಯರಿಗಾಗಿ ಹೊಸ ಯೋಜನೆಗಳನ್ನು ಪರಿಚಯಿಸುವ ಸಾಧ್ಯತೆ
*ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ದೊಡ್ಡ ಕೊಡುಗೆ ನಿರೀಕ್ಷೆ
*ಉದ್ಯೋಗ ಮತ್ತು ಕೌಶಲ್ಯಗಳಿಗೆ ಒತ್ತು ನೀಡುವ ಸಾಧ್ಯತೆ