ನವದೆಹಲಿ, ಫೆ.01 (DaijiworldNews/AA): ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ವಿರೋಧ ಪಕ್ಷದ ನಾಯಕರು ಗದ್ದಲ ಎಬ್ಬಿಸಿದ್ದಾರೆ.

ಬಜೆಟ್ನಲ್ಲಿ 5 ಪ್ರಮುಖ ವಿಚಾರಗಳಿಗೆ ಹೆಚ್ಚಿನ ಆದ್ಯತೆ:
*ಅಭಿವೃದ್ಧಿಗೆ ಹೆಚ್ಚಿನ ಒತ್ತು
*ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
*ಖಾಸಗಿ ಕ್ಷೇತ್ರಕ್ಕೆ ಹೆಚ್ಚಿನ ಹೂಡಿಕೆ
*ಮದ್ಯಮ ವರ್ಗದ ಅಭಿವೃದ್ಧಿಗೆ ಆದ್ಯತೆ
*ಬಡವರು, ಮಹಿಳೆಯರು ರೈತರ ಅಭಿವೃದ್ಧಿಗೆ ಆದ್ಯತೆ
ಇದು ಅಭಿವೃದ್ಧಿಯ ಬಜೆಟ್ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದಿದ್ದಾರೆ.
ಬಡತನ ನಿರ್ಮೂಲನೆಗೆ ಹೆಚ್ಚು ಒತ್ತು:
ಈ ಬಾರಿಯ ಬಜೆಟ್ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.