ರಾಯ್ಪುರ,ಫೆ.01 (DaijiworldNews/AK): ಭದ್ರತಾ ಪಡೆ ನಡೆಸಿದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಬಿಜಾಪುರದಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ 8:30ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರದೇಶದಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ), ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ಅದರ ಗಣ್ಯ ಘಟಕ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.