ಬೆಂಗಳೂರು, ಫೆ.02(DaijiworldNews/TA): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿನೋವು ಹಿನ್ನಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ, ಸತತ ಎರಡು ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ಪಡೆದು, ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಡಾ. ಸತ್ಯನಾರಾಯಣ ನಡೆಸಿದ ಆರೋಗ್ಯ ಪರೀಕ್ಷೆಯಲ್ಲಿ ಎಡಗಾಲಿನ ಎಕ್ಸ್-ರೇ ಮಾಡಿ ನಂತರ, ರಿಪೋರ್ಟ್ ನಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಲಾಗಿದೆ. ಮಂಡಿನೋವು ತಗ್ಗಿಸಲು ಅವರಿಗೆ ಔಷಧಿಯೂ ನೀಡಲಾಗಿದೆ.

ಈ ಹಿಂದೆ, ಸಿದ್ದರಾಮಯ್ಯ ಅವರು ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ, ಈಗ ಅದರ ಜಾಗದಲ್ಲಿ ಒತ್ತಡ ಬಿದ್ದು, ನೋವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಮೂರು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ. ಡಿಸ್ಚಾರ್ಜ್ ಆದ ನಂತರ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ, ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮಕ್ಕೆ ಸಿಎಂ ಭೇಟಿಯನ್ನು ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರದ್ದುಗೊಳಿಸಲಾಗಿದೆ. ಮಣಿಪಾಲ್ ಆಸ್ಪತ್ರೆ ವೈದ್ಯರು, ಸದ್ಯ ಸಿಎಂ ಅವರು ಯಾವುದೇ ಪ್ರಯಾಣ ಮಾಡಬಾರದೆಂದು ಸಲಹೆ ನೀಡಿದ್ದಾರೆ.