ಧಾರವಾಡ, ಫೆ.07(DaijiworldNews/TA): ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ.
ಈ ತೀರ್ಪು ಪ್ರಕಟವಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, "ನಾವು ಕಾನೂನು ಹೋರಾಟ ಮುಂದುವರಿಸೋಣ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾನು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವೆನು," ಎಂದು ಹೇಳಿದ್ದಾರೆ.
ಲೋಕಾಯುಕ್ತ ಮುಡಾ ಹಗರಣದ ತನಿಖೆಗಾಗಿ ಸಿಬಿಐ ತನಿಖೆ ನಡೆಸುವಂತೆ, ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಕುರಿತು, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ ನಂತರ, ಶುಕ್ರವಾರ ತೀರ್ಪು ಹೊರಡಿಸಿದ್ದಾರೆ.