ನವದೆಹಲಿ, ಫೆ.08 (DaijiworldNews/AA): ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲಾಗಿದ್ದು, ಅವರಿಗೆ ಭಾರೀ ಮುಖಭಂಗವಾಗಿದೆ.

ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ ಈ ಬಾರಿಯೂ ಗೆಲ್ಲುವ ವಿಶ್ವಾಸ ಹೊಂದಿದ್ದರು. ಆದರೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಎಎಪಿಗೆ ಭಾರಿ ಹಿನ್ನಡೆಯಾಗಿದ್ದು, ಇದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ. ಪರಿಣಾಮವಾಗಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಎಎಪಿ ಕನಸು ಭಗ್ನವಾಗಿದೆ.
ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ವರ್ಮಾ ಅವರು 3182 ಮತಗಳಿಂದ ಮುನ್ನಡೆ ಸಾಧಿಸುವ ಮೂಲಕ ಕೇಜ್ರಿವಾಲ್ ಸೋತಿದ್ದಾರೆ.