ನವದೆಹಲಿ, ಫೆ.08 (DaijiworldNews/AA): ದೇಶದ ಜನರ ಗಮನ ತನ್ನತ್ತ ಸೆಳೆದಿದ್ದ ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 27 ವರ್ಷದ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ.

ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 46 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಬಿಜೆಪಿ 27 ವರ್ಷಗಳ ಬಳಿಕ ರಾಜ್ಯದಲ್ಲಿ ಅಧಿಕಾರ ನಡೆಸಲು ಸಿದ್ಧತೆ ನಡೆಸಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ, ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸನ್ನ ಹೊಂದಿದ್ದ ಆಪ್ಗೆ ನಿರಾಸೆಯಾಗಿದ್ದು, 27 ವರ್ಷದ ಬಳಿಕ ಬಿಜೆಪಿ ಮರಳಿ ಅಧಿಕಾರದ ಗದ್ದುಗೆಗೇರುವ ಸಂಭ್ರಮದಲ್ಲಿದೆ.