ನವದೆಹಲಿ,ಫೆ.08 (DaijiworldNews/AK): ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ. ಇದು ‘ಮೋದಿ ಗ್ಯಾರಂಟಿ’ಯ ಗೆಲುವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೆಹಲಿ ಚುನಾವಣಾಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಮೇಲುಗೈ ಸಾಧಿಸಿದ ಕುರಿತು ಮಾತನಾಡಿದ ಅವರು, ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಷ್ಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪ್ ಮುಕ್ತಗೊಳಿಸಲು ತೀರ್ಮಾನಿಸಿದ್ದಾರೆ ಎಂದರು.
ಇದು ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ಒಂದು ಉದಾಹರಣೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಆಪ್ ಸೋಲನ್ನು ದುರಹಂಕಾರ ಮತ್ತು ಅರಾಜಕತೆಯ ಸೋಲು ಎಂದು ಕರೆದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ. ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಧನ್ಯವಾದ ಎಂದು ಕೃತಜ್ಞತೆ ಸಲ್ಲಿಸಿದರು.