ರಾಯ್ಪುರ, ಫೆ.09 (DaijiworldNews/AA): ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ 12 ನಕ್ಸಲರು ಹತ್ಯೆ ಮಾಡಿದ್ದಾರೆ. ಜೊತೆಗೆ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸಂಭವಿಸಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಪ್ರಾರಂಭವಾಗಿದೆ. ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.